Monday, June 8, 2026
Homeಕರಾವಳಿಮಂಗಳೂರು; ಉಳಾಯಿಬೆಟ್ಟು ದರೋಡೆ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು; ಉಳಾಯಿಬೆಟ್ಟು ದರೋಡೆ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು; ಉಳಾಯಿಬೆಟ್ಟುವಿನಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್‌ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು  ಮತ್ತೆ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ.  ಈ ಮೂಲಕ ಬಂಧಿತರ ಸಂಖ್ಯೆ 13ಕ್ಕೇರಿದೆ.

 ಕೇರಳ ತ್ರಿಶೂರ್ ನಿವಾಸಿಗಳಾದ ಡೆವಿನ್, ಗಾಡ್ವಿನ್, ಅಮಲ್‌ ಕೃಷ್ಣ ಬಂಧಿತ ಆರೋಪಿಗಳು .ಈ ಪ್ರಕರಣದಲ್ಲಿ ಉಪ್ಪಳ ಬಾಲಕೃಷ್ಣ ಶೆಟ್ಟಿ, ಪೆರುವಾಯಿಯ ರೇಮಂಡ್ ಡಿಸೋಜ, ನೀರುಮಾರ್ಗದ ರಮೇಶ್, ವಸಂತ್ ಕುಮಾರ್, ತಿರುವನಂತಪುರದ ಜಾನ್‌ಬಾಸ್ಕೋ, ತ್ರಿಶೂರ್‌ನ ಶಿಜೋ ದೇವಸಿ, ಸತೀಶ್ ಬಾಬು, ಶಾಕೀರ್ ಹುಸೇನ್, ಸಜೀಶ್ ಎಂ., ವಿನೋಜ್ ಪಿ.ಕೆ. ಹಾಗೂ ಕಾರು ಚಾಲಕ ಬಿಪಿನ್‌ರಾಜ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು. 13 ಮಂದಿ ಆರೋಪಿಗಳ ಪೈಕಿ ಮೂವರು ದ.ಕ. ಜಿಲ್ಲೆಯವರಾಗಿದ್ದರೆ ಉಳಿದ 10 ಮಂದಿ ಕೇರಳದವರು. ಬಂಧಿತ ಆರೋಪಿಗಳಿಂದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರ ಬಂಧನವಾಗಲು ಬಾಕಿಯಿದೆ. ಅವರಿಂದಲೂ ಕಳವುಗೈದ ವಸ್ತುಗಳನ್ನು ವಶಪಡಿಸಿಕೊಳ್ಳಲು ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!