Saturday, April 20, 2024
Homeಕರಾವಳಿಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; 7 ಆರೋಪಿಗಳ ಬಂಧನ

ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ; 7 ಆರೋಪಿಗಳ ಬಂಧನ

spot_img
- Advertisement -
- Advertisement -

ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಉಳ್ಳಾಲ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ 7 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿಂದೆ 5 ಜನರನ್ನು ಬಂಧಿಸಲಾಗಿತ್ತು. ಇದೀಗ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ

ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ. ಇದಕ್ಕಿಂತ ಮುಂಚೆ ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹೇನ್ ತಲಪಾಡಿ ,ಅಖಿಲ್ ತಲಪಾಡಿ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರಕ್ಕೆ ಗುರುವಾರ ಸಂಜೆ ವೇಳೆ ಕೇರಳ ಮೂಲದ ಆರು ಮಂದಿ ವಿಹಾರಕ್ಕೆಂದು‌ ಬಂದಿದ್ದರು.ಇವರಲ್ಲಿ ಮೂವರು ಯುವತಿಯರ ಜತೆ ಇದ್ದ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ಸಂಶಯದ ಮೇಲೆ ತಂಡವೊಂದು ಇವರನ್ನು ಹಿಂಬಾಲಿಸಿ ಹಲ್ಲೆ ನಡೆಸಿತ್ತು.ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿರುವ ಸಂದರ್ಭ ತಂಡ ಈ ಕೃತ್ಯ ಎಸಗಿದ್ದು ಇದರಿಂದ ಮೂವರು ಯುವಕರು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

- Advertisement -
spot_img

Latest News

error: Content is protected !!