Sunday, June 7, 2026
Homeಕರಾವಳಿಕೊರೋನಾ ರಣಕೇಕೆ: ಉಳ್ಳಾಲ ಎಸೈಯನ್ನೂ ಬಿಡದ ಮಹಾಮಾರಿ

ಕೊರೋನಾ ರಣಕೇಕೆ: ಉಳ್ಳಾಲ ಎಸೈಯನ್ನೂ ಬಿಡದ ಮಹಾಮಾರಿ

- Advertisement -
- Advertisement -

ಉಳ್ಳಾಲ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇವತ್ತೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ 12 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಮತ್ತೊಂದು ಕಡೆ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರಲ್ಲೂ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರೋದು ಆತಂಕಕ್ಕೆ ಕಾರಣವಾಗಿದೆ.

ಹೀಗಿರುವಾಗಲೇ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಉಳ್ಳಾಲ ಪೊಲೀಸ್ ಠಾಣೆಯ ಎಸ್ ಐ ಅವರಲ್ಲೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಇದೀಗ ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇವರಿಗೆ ಕೊರೊನಾ ಹೇಗೆ ಬಂತು ಎಂಬ ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಂದು ಕಡೆ ಇದೀಗ ಉಳ್ಳಾಲ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

- Advertisement -

Latest News

error: Content is protected !!