Wednesday, June 3, 2026
Homeಕರಾವಳಿಮಂಗಳೂರಿನ ಯುವಕನ ಮೃತದೇಹ ಮುಂಬೈನ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಂಗಳೂರಿನ ಯುವಕನ ಮೃತದೇಹ ಮುಂಬೈನ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು; ಇಲ್ಲಿನ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾಗಿದೆ.

ಉಳ್ಳಾಲ ಗುತ್ತು ಬಂಡಿಕೊಟ್ಯ ನಿವಾಸಿ ಸುಂದರ ಎಂಬವರ ಪುತ್ರ ಸುಧೀರ್ ಕುಮಾರ್(32) ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದೆ.

ಆ.14ರಂದು ಸುಧೀರ್ ನಾಪತ್ತೆ ಬಗ್ಗೆ ಮುಂಬೈಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ.

ಸುಧೀರ್ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ಸುಧೀರ್ ತನ್ನ ಸ್ನೇಹಿತರ ಬಳಿ ತನಗೆ ಜೀವ ಬೆದರಿಕೆ ಇದೆ ಎಂಬ ಬಗ್ಗೆ ಹೇಳಿಕೊಂಡಿದ್ದರಂತೆ. ಅದರ ಬೆನ್ನಲ್ಲೇ ಅವರ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!