Thursday, July 23, 2026
Homeಕರಾವಳಿಮಂಗಳೂರುಸುಳ್ಯ: ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ; ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಸುಳ್ಯ: ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ; ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ತಾಲೂಕಿನ ಮರ್ಕಂಜ ಗ್ರಾಮದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಸೋಮವಾರಪೇಟೆಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಕಡಬ ತಾಲೂಕಿನ ನಿವಾಸಿ ಧನುಷ್ (18) ಎಂಬಾತನೇ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಬಾಲಕಿಯು ಮೇ 7 ರಂದು ಮಂಗಳೂರಿಗೆ ಕೆಲಸದ ನಿಮಿತ್ತ ತೆರಳುತ್ತಿರುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದಳು. ಆದರೆ, ತಡರಾತ್ರಿಯಾದರೂ ಆಕೆ ಮನೆಗೆ ಮರಳದಿದ್ದಾಗ ಕಂಗಾಲಾದ ಕುಟುಂಬಸ್ಥರು ಸಂಬಂಧಿಕರು ಹಾಗೂ ತಿಳಿದವರ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಎಲ್ಲೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಮೇ 11 ರಂದು ಸುಳ್ಯ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರು ಸ್ವೀಕರಿಸಿದ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಸತತ ಶೋಧ ಕಾರ್ಯ ನಡೆಸಿದ ಸುಳ್ಯ ಪೊಲೀಸರು, ಜುಲೈ 22ರಂದು ಸೋಮವಾರಪೇಟೆಯಲ್ಲಿ ಬಾಲಕಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಬಾಲಕಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಆರೋಪಿ ಧನುಷ್ ತನಗೆ ಆಮಿಷವೊಡ್ಡಿ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹೇಳಿಕೆ ನೀಡಿದ್ದಾಳೆ.

ಬಾಲಕಿಯ ಹೇಳಿಕೆಯನ್ನು ಆಧರಿಸಿ ಸುಳ್ಯ ಪೊಲೀಸರು ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 64(೨)(m) ಹಾಗೂ ಪೋಕ್ಸೋ ಕಾಯ್ದೆಯ (POCSO Act) ಪ್ರಮುಖ ಕಾಯ್ದೆಗಳಾದ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!