Monday, April 29, 2024
Homeಕರಾವಳಿಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಬೇಸರ; ಯಾವುದೇ ರಾಜಕೀಯ ಪಕ್ಷವಿರಲಿ...

ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಬೇಸರ; ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಕರೆ

spot_img
- Advertisement -
- Advertisement -

ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಬೇಸರ ವ್ಯಕ್ತಪಡಿಸಿದ್ದಾರೆ. ಬಿಲ್ಲವ ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷದಲ್ಲಿರಲಿ ಅವರಿಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟಿದ್ದಾರೆ.

ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಶಾಸಕ ಉಮಾನಾಥ್ ಕೋಟ್ಯಾನ್ ಉಳಿದ ಪಕ್ಷದ ಸಮುದಾಯ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ. ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ.ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

 ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ ಎಂದರು. ಕಳೆದ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ‌ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಕೂಡ ಉಮಾನಾಥ್ ಕೋಟ್ಯಾನ್ ಮಾತನಾಡಿ ಬೇಸರ ವ್ಯಕ್ತಪಡಿಸಿದರು.

ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ.ಕಾಂಗ್ರೆಸ್​ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತೆ ಎಂಬ ಭಯ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ?  ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟಿದ್ದಾರೆ.

- Advertisement -
spot_img

Latest News

error: Content is protected !!