Saturday, June 6, 2026
Homeಕರಾವಳಿಉಡುಪಿ"ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ನೋವಿನ ಅರಿವಿಲ್ಲ"

“ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ನೋವಿನ ಅರಿವಿಲ್ಲ”

- Advertisement -
- Advertisement -

ಬೆಂಗಳೂರು: ಯಾರೂ ಕೂಡ ರಾಜಕೀಯದಲ್ಲಿ ಯಾರ ಹೆಸರು ಬಳಸಿಕೊಳ್ಳದೇ ಗೆದ್ದಿಲ್ಲ. ಕುಸುಮಾ ಅವರು ಡಿ.ಕೆ.ರವಿಯವರನ್ನು ಅಧಿಕೃತವಾಗಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಅವರ ಗಂಡನ ಹೆಸರು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಲು ಇವರು ಯಾರು. ಇಷ್ಟಕ್ಕೂ ಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ನೋವಿನ ಅರಿವಿಲ್ಲ ಎಂದು ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಮೂದಲಿಸಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ವಾಗ್ಧಳಿ ನಡೆಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕುಸುಮಾ ಪತಿ, ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ. ಕೆ. ರವಿ ಹೆಸರನ್ನು ಪ್ರಸ್ತಾಪಿಸಿದ್ದರು. “ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ” ಎಂದು ಹೇಳಿಕೆ ನೀಡಿದ್ದರು.

ಶೋಭಾ ಕರಂದ್ಲಾಜೆ ಹೆಣ್ಣು ಮಕ್ಕಳ ನೋವಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಶೋಭಾರಿಗೆ ತಮ್ಮ ತಂದೆ ನೋವಿನ ಬಗ್ಗೆ ಅರಿವಿರಬಹುದು. ಆದರೆ ಗಂಡನನ್ನು ಕಳೆದುಕೊಂಡ ಹೆಣ್ಣಿನ ಏಕಾಂಗಿತನ, ಅವರ ನೋವು ಇವರಿಗೆ ಅರ್ಥವಾಗುವುದಿಲ್ಲ ಎಂದು ಉಮಾಶ್ರೀ ಟೀಕಿಸಿದರು.

ಬಿಜೆಪಿಯ ಭೇಟಿ ಬಚಾವೊ-ಭೇಟಿ ಫಡಾವೋ ಎನ್ನುವ ಯೋಜನೆಯೇ ಸುಳ್ಳು. ಇಂತಹ ಯೋಜನೆಗಳಿಂದ ಯಾವುದೇ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಲು ಆಗುವುದಿಲ್ಲ. ಆರ್.ಆರ್.ನಗರದಲ್ಲಿ ಬಿಜೆಪಿ ನಾಯಕರು ಸೋಲುವ ಭೀತಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಉಮಾಶ್ರೀ ಹೇಳಿದರು.

- Advertisement -

Latest News

error: Content is protected !!