Thursday, June 4, 2026
Homeಕರಾವಳಿಮಂಗಳೂರು; ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ನಲ್ಲಿ ಅಘೋಷಿತ ಬಂದ್

ಮಂಗಳೂರು; ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್ ನಲ್ಲಿ ಅಘೋಷಿತ ಬಂದ್

- Advertisement -
- Advertisement -

ಸುರತ್ಕಲ್: ಕಾಟಿಪಳ್ಳದಲ್ಲಿ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸುರತ್ಕಲ್ ಜಂಕ್ಷನ್ ನಲ್ಲಿ ಮೂರು ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿರುವ ಕಾರಣ ಬಂದ್ ವಾತಾವರಣ ಸೃಷ್ಟಿಯಾಗಿದೆ.

ಸುರತ್ಕಲ್ ನಗರದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕಾಟಿಪಳ್ಳಕ್ಕೆ ವಾಹನದ ಮೂಲಕ ತೆರಳಲು ಅವಕಾಶ ನಿಷೇಧಿಸಲಾಗಿದೆ.

ಅಲ್ಲದೇ ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇನ್ನು ಮರಣೋತ್ತರ ಪರೀಕ್ಷೆ ಬಳಿಕ ಸುರತ್ಕಲ್ ಮೂಲಕ ಕಾಟಿಪಳ್ಳಕ್ಕೆ ಬಿಗಿ ಪೊಲೀಸ್ ಭದ್ರತೆ ಮೂಲಕ ಜಲೀಲ್ ಮೃತ ದೇಹ ರವಾನೆ ಮಾಡಲಾಗಿದೆ.

- Advertisement -

Latest News

error: Content is protected !!