Thursday, July 16, 2026
Homeಕರಾವಳಿಮಂಗಳೂರುಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು 7 ಮಂದಿಗೆ ಗಾಯ

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು 7 ಮಂದಿಗೆ ಗಾಯ

- Advertisement -
- Advertisement -

ಪುತ್ತೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯಗಳಾಗಿರುವ ಘಟನೆ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ಸಂಭವಿಸಿದೆ.

ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ‌ ಎಂಬಲ್ಲಿ ಈ ದುರ್ಘಟನೆ ನಡೆದಿದೆ.ಸೇತುವೆ ನಿರ್ಮಾಣ ಕಾರ್ಯದ ಕೊನೆಯ ಹಂತದಲ್ಲಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ವೇಳೆ ಕೆಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಹೋಗಿದೆ.

ನಿರ್ಮಾಣ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಆರು ಕಾರ್ಮಿಕರನ್ನು ರಕ್ಷಣೆ ಮಾಡಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!