Friday, April 18, 2025
Homeಕರಾವಳಿಮಂಗಳೂರು9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ  ಸಹಚರನ ಸೆರೆ: ಮಾದಕ ವಸ್ತು MDMA ...

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶನ  ಸಹಚರನ ಸೆರೆ: ಮಾದಕ ವಸ್ತು MDMA  ವಶ

spot_img
- Advertisement -
- Advertisement -

ಮಂಗಳೂರು; ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ನಿಷೇಧಿತ ಮಾದಕ ವಸ್ತು MDMA ನ್ನು ವಶಪಡಿಸಿಕೊಂಡಿರುತ್ತಾರೆ.

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರನೋರ್ವನು ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ಮಂಗಳೂರು ನಗರ ನಂತೂರು ಪರಿಸರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಕಾಸರಗೋಡು ಜಿಲ್ಲೆ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32), ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿನ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದನು ನ್ಯಾಯಾಲಯದಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ಪ್ರಸ್ತುತ ಈತನ ವಿರುದ್ಧ ವಾರಂಟ್ ಜ್ಯಾರಿಯಲ್ಲಿರುತ್ತದೆ.

ಈ ಪ್ರಕರಣದ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ IPS  ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ದಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಶ್ರೀ ಕೆ. ರವಿಶಂಕರ್, KSPS ರವರ  ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!