Monday, June 30, 2025
Homeಕರಾವಳಿಮಂಗಳೂರು: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆ!

ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆ!

spot_img
- Advertisement -
- Advertisement -

ಮಂಗಳೂರು: ರಾವ್ ಅಂಡ್ ರಾವ್ ಸರ್ಕಲ್ ರಸ್ತೆಯಲ್ಲಿರುವ ಸ್ಟಾರ್ ಟವರ್ ಬಳಿ ಆಗಸ್ಟ್ 24ರ ಮಂಗಳವಾರ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ ಕಟ್ಟಡದ ನೆಲಮಹಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ದೇಹದ ಕೆಲಭಾಗ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಈ ವ್ಯಕ್ತಿ ಎರಡು ದಿನಗಳ ಹಿಂದೆ ಸ್ಟಾರ್ ಟವರ್ ಕಟ್ಟಡದ ನೆಲ ಅಂತಸ್ತಿನ ಖಾಲಿ ಜಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಮೃತ ವ್ಯಕ್ತಿಯ ವಯಸ್ಸು 45 ವರ್ಷ ಎಂದು ಅಂದಾಜಿಸಲಾಗಿದ್ದು, ಮೃತನ ಬಲಗೈ ‘ಆರ್ ಎಸ್’, ‘ಓಂ’ ಮತ್ತು ನಕ್ಷತ್ರದ ಹಚ್ಚೆಗಳಿವೆ.

ಈ ವ್ಯಕ್ತಿಯ ಸಾವಿನ ಬಗ್ಗೆ ಅನುಮಾನವಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪರಿಚಿತ ವ್ಯಕ್ತಿಯ ಮಾಹಿತಿ ಇದ್ದವರು ಬಂದರು ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!