Friday, June 27, 2025
Homeತಾಜಾ ಸುದ್ದಿಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ: ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ: ಶಿಕ್ಷಣ ಇಲಾಖೆಯಿಂದ ಸುತ್ತೋಲೆ

spot_img
- Advertisement -
- Advertisement -

ಬೆಂಗಳೂರು: ಮಾರ್ಚ್ 28 ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಮಾರ್ಚ್ 28 ರಂದು ರಾಜ್ಯಾದ್ಯಂತ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆಯಲಿದೆ. ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಶಿಕ್ಷಣ ಇಲಾಖೆ ಸಮವಸ್ತ್ರ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

- Advertisement -
spot_img

Latest News

error: Content is protected !!