Wednesday, May 1, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಗೆ ಇಎಸ್ಐ ಆಸ್ಪತ್ರೆ ಮಂಜೂರು: ಕರಾವಳಿಯ ಕಾರ್ಮಿಕರ ವೈದ್ಯಕೀಯ ಸೇವೆಗಳು ಇನ್ನಷ್ಟು ಸುಲಭ

ಉಡುಪಿ ಜಿಲ್ಲೆಗೆ ಇಎಸ್ಐ ಆಸ್ಪತ್ರೆ ಮಂಜೂರು: ಕರಾವಳಿಯ ಕಾರ್ಮಿಕರ ವೈದ್ಯಕೀಯ ಸೇವೆಗಳು ಇನ್ನಷ್ಟು ಸುಲಭ

spot_img
- Advertisement -
- Advertisement -

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯ ದೇಶದಾದ್ಯಂತ 23 ನೂತನ ಇಎಸ್ಐ ಆಸ್ಪತ್ರೆಗಳನ್ನು ಮಂಜೂರು ಮಾಡಿದ್ದು, ಕರ್ನಾಟಕದಲ್ಲಿ ಉಡುಪಿ ಹಾಗೂ ತುಮಕೂರು ಜಿಲ್ಲೆಗಳಿಗೆ 100 ಬೆಡ್ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣಕ್ಕೆ ತಾತ್ವಿಕ ಅನುಮೋದನೆಯನ್ನು ನೀಡಿದೆ.

ಕರಾವಳಿಯ ಜನತೆಯ ಬಹುದಿನಗಳ ಬೇಡಿಕೆಯಾದ ಇಎಸ್ಐಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಈ ಹಿಂದೆ ಒತ್ತಾಯಿಸಿದ್ದರು.

ಈ ಕುರಿತು ಕೇಂದ್ರ ಕಾರ್ಮಿಕ ಸಚಿವ ಭೂಪೆಂದ್ರ ಯಾದವ್ ಅವರನ್ನು ಕೂಡ ಭೇಟಿಯಾಗಿ ಚರ್ಚಿಸಿ, ಉಡುಪಿಗೆ ಇಎಸ್ ಐ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಶೋಭಾ ಕರಂದ್ಲಾಜೆ ವಿನಂತಿಸಿಕೊಂಡಿದ್ದರು.

ಇದರ ಪರಿಣಾಮವಾಗಿ ಇಎಸ್ಐಸಿ ತನ್ನ 188 ನೇ ಸಾಮಾನ್ಯ ಸಭೆಯಲ್ಲಿ ಉಡುಪಿ ಜಿಲ್ಲೆಗೆ ಇಎಸ್ಐ ಆಸ್ಪತ್ರೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!