Saturday, June 6, 2026
Homeಕರಾವಳಿಮಂಗಳೂರುಮಂಗಳೂರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ; ಇಂದು ಜಿ.ಪಂ.‌ ಸಭಾಂಗಣದಲ್ಲಿ ರೈಲ್ವೇ ಇಲಾಖೆಯ ಸಭೆ

ಮಂಗಳೂರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ; ಇಂದು ಜಿ.ಪಂ.‌ ಸಭಾಂಗಣದಲ್ಲಿ ರೈಲ್ವೇ ಇಲಾಖೆಯ ಸಭೆ

- Advertisement -
- Advertisement -

ಮಂಗಳೂರು: ರೈಲ್ವೇ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ವೀಕ್ಷಣೆ ಹಾಗೂ ಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವರನ್ನು ಸಂಸದ ಬ್ರಿಜೇಶ್ ಚೌಟ ಮತ್ತು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸ್ವಾಗತಿಸಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರೈಲ್ವೇ ಇಲಾಖೆ ಅಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಂದು ಬೆಳಗ್ಗೆ ಮಂಗಳೂರು ಜಂಕ್ಷನ್ ಮತ್ತು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಸಚಿವ ಸೋಮಣ್ಣ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರೈಲ್ವೇ ಇಲಾಖೆಯ ಸಭೆ ನಡೆಸಲಿದ್ದಾರೆ.ಮಂಗಳವಾರ ರಾತ್ರಿ ಆಗಮಿಸಿರುವ ವಿ. ಸೋಮಣ್ಣ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು

- Advertisement -

Latest News

error: Content is protected !!