- Advertisement -
![]()
- Advertisement -
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ತೆರಳಿರುವ ಕುಮಾರಸ್ವಾಮಿ ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ.
ಇಂದು ಬೆಳಗ್ಗೆ ಕೇರಳಂ ರಾಜ್ಯದ ಕೊಚ್ಚಿಯಲ್ಲಿರುವ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ಪಕ್ಷದ ಹಲವು ಮುಖಂಡರೊಂದಿಗೆ ಕುಮಾರಸ್ವಾಮಿ ಅಯ್ಯಪ್ಪ ಮಾಲೆ ಧರಿಸಿದ್ದು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಎಸ್. ಸುರೇಶ್ ಬಾಬು, ಮಾಜಿ ಸಚಿವರಾದ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು ಮತ್ತು ಶಾಸಕ ಶರಣಗೌಡ ಕಂದಕೂರು ಸೇರಿದಂತೆ ಹಲವರು ಸುಮಾರು ಮೂವತ್ತು ಮುಖಂಡರು ಕುಮಾರಸ್ವಾಮಿ ಜೊತೆ ಮಾಲೆ ಧರಿಸಿ ಶಬರಿಮಲೆಗೆ ತೆರಳಿದ್ದಾರೆ.
- Advertisement -


