Saturday, June 6, 2026
Homeಕರಾವಳಿಉಡುಪಿಭತ್ತದ ಗದ್ದೆಯಲ್ಲಿ ಕಳೆ ಕಿತ್ತ ಕೇಂದ್ರ ಸಚಿವೆ!

ಭತ್ತದ ಗದ್ದೆಯಲ್ಲಿ ಕಳೆ ಕಿತ್ತ ಕೇಂದ್ರ ಸಚಿವೆ!

- Advertisement -
- Advertisement -

ಉಡುಪಿ: ಕೇಂದ್ರ ಸಚಿವೆ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಂದು ಭತ್ತದ ಗದ್ದೆಯಲ್ಲಿ ಕೆಲಸ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭತ್ತದ ಗದ್ದೆಯಲ್ಲಿ ಕಳೆ ಕಿತ್ತಿದ್ದಾರೆ.

ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 140 ಎಕರೆ ಹಡಿಲು ಭೂಮಿಯಲ್ಲಿ ನಾಟಿ ಮಾಡಲಾಗಿದೆ. ಗದ್ದೆಗಳಲ್ಲಿ ಪೈರಿನ ನಡುವೆ ಬೆಳೆದ ಕಳೆ ತೆಗೆಯುವ ಕಾರ್ಯದಲ್ಲಿ ಇಂದು ಶೋಭಾ ಕರಂದ್ಲಾಜೆ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ. ರಘುಪತಿ ಭಟ್,‌ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಲಾಡಿ ಸುರೇಶ್ ನಾಯಕ್, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ, ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.‌

ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕೂಡಾ ಕಳೆ ಕೀಳುವ ಕೆಲಸದಲ್ಲಿ ಪಾಲ್ಗೊಂಡಿದ್ದರು. ಒಟ್ಟು 1500 ಎಕರೆ ಹಡಿಲು ಭೂಮಿಯ ಪುನರೋತ್ಥಾನ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿದೆ.

- Advertisement -

Latest News

error: Content is protected !!