Wednesday, June 24, 2026
Homeಕರಾವಳಿಮಂಗಳೂರುಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಧರ್ಮಸ್ಥಳ ಭೇಟಿ ರದ್ದು

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಧರ್ಮಸ್ಥಳ ಭೇಟಿ ರದ್ದು

- Advertisement -
- Advertisement -

ಬೆಂಗಳೂರು: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಧರ್ಮಸ್ಥಳ ಪ್ರವಾಸ ರದ್ದುಗೊಂಡಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಬೇಕಿದ್ದ ಹೆಚ್.ಡಿ. ಕುಮಾರಸ್ವಾಮಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡುವ ಕಾರ್ಯಕ್ರಮಗಳು ನಿಗದಿಯಾಗಿದ್ದವು.

ಅಲ್ಲದೇ ಸೌತಡ್ಕದಲ್ಲಿ ಮಹಾಗಣಪತಿ ಆಂಗ್ಲಮಾಧ್ಯಮ ಶಾಲೆಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲೂ ಕುಮಾರಸ್ವಾಮಿ ಭಾಗವಹಿಸಬೇಕಾಗಿತ್ತು.

ಆದರೆ ಹವಾಮಾನ ವೈಪರೀತ್ಯದಿಂದಾಗಿ ಕುಮಾರಸ್ವಾಮಿ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ಬೆಂಗಳೂರಿನ ಹೆಚ್ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್ ಆಗದ ಹಿನ್ನೆಲೆಯಲ್ಲಿ ಪ್ರವಾಸ ರದ್ದುಗೊಂಡಿದೆ.

- Advertisement -

Latest News

error: Content is protected !!