Thursday, June 25, 2026
Homeಕರಾವಳಿಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಸ್ವಸಹಾಯ ಸಂಘ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮದಲ್ಲಿ...

ಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಸ್ವಸಹಾಯ ಸಂಘ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ವತಿಯಿಂದ ಧರ್ಮಸ್ಥಳದ ಅಮೃತ ವರ್ಷಿಣಿಯಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.

https://youtu.be/K_krVPSqqog?si=5DN3cra7XO6FMU6q

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಿದರು. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಧರ್ಮಸ್ಥಳ ಸ್ವಸಹಾಯ ಸಂಘಗಳ ಸದಸ್ಯರಿಗೆ ಸುಮಾರು 600 ಕೋಟಿ ರೂಪಾಯಿಯ ಲಾಭಾಂಶವನ್ನು ವಿತರಣೆ ಮಾಡಲಾಯಿತು.

- Advertisement -

Latest News

error: Content is protected !!