Saturday, June 27, 2026
Homeಕರಾವಳಿಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ; ಮಂಗಳೂರಿಗೆ ಭೇಟಿ ನೀಡಿ ಪರಿಶೀಲಿಸಿದ...

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ; ಮಂಗಳೂರಿಗೆ ಭೇಟಿ ನೀಡಿ ಪರಿಶೀಲಿಸಿದ ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನವಾಲ್

- Advertisement -
- Advertisement -

ಮಂಗಳೂರು: ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಇಲಾಖೆ ಸಚಿವ ಸರ್ಬಾನಂದ ಸೋನೋವಾಲ ಮಂಗಳೂರಿಗೆ ಭೇಟಿ ನೀಡಿ ಪರಿಶೀಲಿಸಿದರು‌.

ಸಾರ್ವಜನಿಕ ಸಮಾವೇಶ ನಡೆಯುವ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆಯ ಬಗ್ಗೆ ಕೇಂದ್ರ ಸಚಿವರಿಗೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಮಾಹಿತಿ ನೀಡಿದರು.

ಆ ಬಳಿಕ ಕೇಂದ್ರ ಸಚಿವ ಸೋನವಾಲ್ ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ್ ಶೆಟ್ಟಿ, ಮಾಜಿ ಎಂಎಲ್ಸಿ ಕ್ಯಾ. ಗಣೇಶ್ ಕಾರ್ಣಿಕ್, ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!