Saturday, June 6, 2026
Homeಚಿಕ್ಕಮಗಳೂರುವಿಕಸಿತ ಭಾರತ ಸಂಕಲ್ಪ ಭಾರತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ:ಅಧಿಕಾರಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಸಚಿವೆ ಶೋಭಾ...

ವಿಕಸಿತ ಭಾರತ ಸಂಕಲ್ಪ ಭಾರತ ಕಾರ್ಯಕ್ರಮದಲ್ಲಿ ಅವ್ಯವಸ್ಥೆ:ಅಧಿಕಾರಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತರಾಟೆ

- Advertisement -
- Advertisement -

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಸೂಕ್ತ ವ್ಯವಸ್ಥೆ ಮಾಡದ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ.

ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಸೂಕ್ತ ಆಯೋಜನೆ ಮಾಡದ ಕಾರಣಕ್ಕಾಗಿ ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಾ ಅಂತಾ ಪ್ರಧಾನಮಂತ್ರಿ ಕೇಳುತ್ತಿದ್ದಾರೆ, ಇಲ್ಲಿ ನೋಡಿದರೆ ಯಾವುದೇ ವ್ಯವಸ್ಥೆ ಇಲ್ಲ, ಏನು ಇದೆಲ್ಲಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾರ್ಯಕ್ರಮದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ವ್ಯವಸ್ಥೆ ಮಾಡದ ಅಧಿಕಾರಿಗೆ ದೂರವಾಣಿ ಕರೆ ಮಾಡಿದ ಶೋಭಾ ಕರಂದ್ಲಾಜೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಊರುಬಗೆ ಗ್ರಾಮದಲ್ಲಿ ನಿನ್ನೆ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಜೊತೆಗೆ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸೇರಿದಂತೆ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

- Advertisement -

Latest News

error: Content is protected !!