Monday, June 8, 2026
Homeಕರಾವಳಿಉಡುಪಿಉಡುಪಿ:ಬ್ರಹ್ಮಾವರದಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

ಉಡುಪಿ:ಬ್ರಹ್ಮಾವರದಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ

- Advertisement -
- Advertisement -

ಉಡುಪಿ: ಬ್ರಹ್ಮಾವರ ತಾಲೂಕಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಯಾತ್ರೆ ನಡೆಯಿತು. ತಿರಂಗ ಯಾತ್ರೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.

ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭಗೊಂಡು ಪ್ರಮುಖ ರಸ್ತೆಗಳಲ್ಲಿ ಸಾಗಿದ ಯಾತ್ರೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಸ್ಥಳೀಯ ಸಂಘಟನೆಗಳು, ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳು ಕೂಡಾ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!