Wednesday, June 3, 2026
Homeತಾಜಾ ಸುದ್ದಿಸಚಿವೆ ಶೋಭಾ ಕರಂದ್ಲಾಜೆ ಹೆಸರು ಬಳಸಿ ತಮಿಳುನಾಡಿನಲ್ಲಿ ವಂಚನೆ: ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್...

ಸಚಿವೆ ಶೋಭಾ ಕರಂದ್ಲಾಜೆ ಹೆಸರು ಬಳಸಿ ತಮಿಳುನಾಡಿನಲ್ಲಿ ವಂಚನೆ: ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್

- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಬಳಸಿಕೊಂಡು ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಚಿವರ ಆಪ್ತ ಎಂದು ಹೇಳಿಕೊಂಡು ತಮಿಳುನಾಡಿನ ಚೆನ್ನೈ ಹಾಗೂ ಊಟಿಯಲ್ಲಿ ಸಾರ್ವಜನಿಕರಿಂದ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ಹೇಳಲಾಗಿದೆ‌.

ಕಳೆದು ಮೂರು ತಿಂಗಳಿನಿಂದ ಪ್ರಕಾಶ್ ಎಂಬ ವ್ಯಕ್ತಿ ವಂಚನೆ ಮಾಡಿದ್ದಾನೆ ಎಂದು ಹೇಳಲಾಗಿದ್ದು, ತಾನು ಸಚಿವೆ ಆಪ್ತ ಎಂದು ಅಲ್ಲಿನ ಕೃಷಿಕರಿಗೆ, ಬ್ಯುಸಿನೆಸ್ ಮ್ಯಾನ್ ಗೆ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ‌ ಕೆಲಸ ಮಾಡಿಸಿ ಕೊಡುವುದಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದು,
ಸಚಿವೆ ಶೋಭಾ ಕರಂದ್ಲಾಜೆಗೆ ವ್ಯಕ್ತಿಯೊಬ್ಬರು ಕರೆ ಮಾಡಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ವರುಣ್ ಆದಿತ್ಯ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಂಚನೆ ಪ್ರಕರಣದಡಿ‌ ಎಫ್ ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!