Wednesday, June 3, 2026
Homeಕರಾವಳಿಉಡುಪಿಮೂರ್ನಾಲ್ಕು ತಿಂಗಳಲ್ಲಿ ಕೆಎಸ್ ಆರ್ ಟಿಸಿ ಸ್ಥಗಿತಗೊಳ್ಳುವ ಆತಂಕ:ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಮೂರ್ನಾಲ್ಕು ತಿಂಗಳಲ್ಲಿ ಕೆಎಸ್ ಆರ್ ಟಿಸಿ ಸ್ಥಗಿತಗೊಳ್ಳುವ ಆತಂಕ:ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಗ್ಯಾರಂಟಿ ಜಾರಿ ಹಿನ್ನೆಲೆಯಲ್ಲಿ ಮೂರು ನಾಲ್ಕು ತಿಂಗಳಲ್ಲಿ ಕೆಎಸ್ಆರ್ ಟಿಸಿ ಸ್ಥಗಿತಗೊಳ್ಳುವ ಆತಂಕ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ಮಾತನಾಡಿದ ಶೋಭಾ ಕರಂದ್ಲಾಜೆ, ಕೆಎಸ್ಆರ್ ಟಿಸಿ ಗೆ ಬಜೆಟ್ ನಲ್ಲಿ ಯಾವುದೇ ವಿಶೇಷ ಅನುದಾನ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

200 ಯೂನಿಟ್ ಉಚಿತ ವಿದ್ಯುತ್ ಇವತ್ತಿನ ತನಕ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಹೇಳಿದ ಶೋಭಾ ಕರಂದ್ಲಾಜೆ, 5 ಕೊಡುಗೆಗಳನ್ನು ಯಾವಾಗ ಜನರಿಗೆ ನೀಡುತ್ತೀರಿ ಎಂದು ಘೋಷಣೆ ಮಾಡಿ, ಭರವಸೆಗಳನ್ನು ಕೊಟ್ಟು ಓಟು ಪಡೆದುಕೊಂಡಿದ್ದೀರಿ, ರಾಜ್ಯದಲ್ಲಿ ಎಲ್ಲಾ ಗ್ಯಾರಂಟಿ ವಿಚಾರದಲ್ಲಿ ಗೊಂದಲ ಕಾಡುತ್ತಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಜಾರಿಯಾದ ನಂತರ ಸಂಬಂಧಪಟ್ಟ ಇಲಾಖೆಯ ನಷ್ಟ ಹೇಗೆ ತುಂಬುತ್ತೀರಿ ಹೇಳಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

- Advertisement -

Latest News

error: Content is protected !!