Saturday, June 6, 2026
Homeಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲೆಯ ಮಳೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ

ಚಿಕ್ಕಮಗಳೂರು ಜಿಲ್ಲೆಯ ಮಳೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ

- Advertisement -
- Advertisement -

ಚಿಕ್ಕಮಗಳೂರು: ತೀವ್ರ ಮಳೆಯಿಂದಾಗಿ ಹಾನಿಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಿಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೃಂಗೇರಿ ಮತ್ತು ಕೊಪ್ಪ ತಾಲೂಕುಗಳಲ್ಲಿ ಪರಿಶೀಲನೆ ನಡೆಸಿರುವ ಶೋಭಾ ಕರಂದ್ಲಾಜೆ,
ಶೃಂಗೇರಿಯ ಕಿಕ್ರೆ, ಕೊಪ್ಪ ತಾಲೂಕಿನ ಗುಡ್ಡೆ ತೋಟ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ.

ಮಳೆಯಿಂದಾಗಿ ಸಂತ್ರಸ್ಥರಾಗಿರುವವರ ಸಮಸ್ಯೆಗಳನ್ನು ಆಲಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪರಿಹಾರ ಕ್ರಮದ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!