Sunday, June 7, 2026
Homeಕರಾವಳಿಉಡುಪಿಕಾಪು: ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಅಧಿಕಾರಿಗಳಿಗೆ ಖಡಕ್‌ ಸೂಚನೆ

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಅಧಿಕಾರಿಗಳಿಗೆ ಖಡಕ್‌ ಸೂಚನೆ

- Advertisement -
- Advertisement -

ಕಾಪು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮೂಳೂರು ತೊಟ್ಟಂ ನ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಡಲ್ಕೊರೆತ ತಡೆಯುವಲ್ಲಿ ಅಧಿಕಾರಿಗಳ ವಿಫಲತೆ, ಕಾಮಗಾರಿ ವಿಳಂಬದ ಬಗ್ಗೆ ಸ್ಥಳೀಯರು ಸಚಿವರ ಗಮನಕ್ಕೆ ತಂದಿದ್ದು ಈ ಬಗ್ಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತೀವ್ರ ತರಾಟೆಗೆ ತೆಗೆದು ಕೊಂಡ ಅವರು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಸರಕಾರ ಮತ್ತು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಖಾಸಗಿ ಆಸ್ತಿ ಪಾಸ್ತಿ ರಕ್ಷಣೆಗಿಂತ ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಧಿಕಾರಿಗಳು ಖಾಸಗಿಯವರ ಜೊತೆ ಕೈಜೋಡಿಸಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದರು.

ಕಡಕ್ಕೊರೆತ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಕೆಲವೇ ವರ್ಷಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣ ಆಗಲಿದೆ. ಮೂಳೂರಿನ ಕಡಕ್ಕೊರೆತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ತುರ್ತು ತಡೆಗೋಡೆ ಜಿಲ್ಲಾಧಿಕಾರಿ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

Latest News

error: Content is protected !!