Thursday, June 4, 2026
Homeಕರಾವಳಿಬಂಟ್ವಾಳ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬಂಟ್ವಾಳ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಬಂಟ್ವಾಳ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬುವಿನಲ್ಲಿ ಎಂಬಲ್ಲಿ ನಡೆದಿದೆ.

ನರಿಕೊಂಬು ಗ್ರಾಮದ ಅಂತರ ಎಂಬಲ್ಲಿರುವ ಗುಡ್ಡವೊಂದರಲ್ಲಿ ಸುಮಾರು 40 ರಿಂದ 50 ವಯಸ್ಸಿನ ಗಂಡಸಿನ ಮೃತದೇಹ ಪತ್ತೆಯಾಗಿದೆ.ಗುಡ್ಡದ ಪಕ್ಕದ ಜಮೀನಿನವರು ತೋಟಕ್ಕೆ ನೀರು ಬಿಡಲು ಹೋದ ವೇಳೆ ಗುಡ್ಡೆಯಲ್ಲಿ ವಾಸನೆ ಬರುತ್ತಿದೆ ಎಂದು ಹೋಗಿ ನೋಡಿದಾಗ ಮರದಲ್ಲಿ ಮೃತದೇಹ ನೇತಾಡುತ್ತಿರುವುದು ಗಮನಕ್ಕೆ ಬಂದಿದೆ. ಅವರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದಕ್ಕೆ ಸುಮಾರು 10 ದಿನಗಳ ಕಾಲ ಆಗಿರಬಹುದು ಎಂದು ಅಂದಾಜಿಸಲಾಗಿದೆ.ಕೊಳೆತ ಸ್ಥಿತಿಯಲ್ಲಿರುವುದರಿಂದ ಮುಖದ ಗುರುತು ಹಿಡಿಯಲು ಸಾಧ್ಯವಾಗಿಲ್ಲ.ವ್ಯಕ್ತಿ ಪ್ಯಾಂಟ್ ಮತ್ತು ಟೀ ಶರ್ಟ್ ಧರಿಸಿದ್ದಾರೆ. ಪೋಲೀಸ್ ತನಿಖೆ ಹಾಗೂ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ನಿಜಾಂಶ ಗೊತ್ತಾಗಲಿದೆ.ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.

- Advertisement -

Latest News

error: Content is protected !!