Sunday, May 5, 2024
Homeಕರಾವಳಿಮಂಗಳೂರುಸುಳ್ಯದ ಯುವತಿಗೆ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸೋದಾಗಿ ಹೇಳಿ 13 ಲಕ್ಷ  ರೂಪಾಯಿ ಪಂಗನಾಮ

ಸುಳ್ಯದ ಯುವತಿಗೆ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸೋದಾಗಿ ಹೇಳಿ 13 ಲಕ್ಷ  ರೂಪಾಯಿ ಪಂಗನಾಮ

spot_img
- Advertisement -
- Advertisement -

ಸುಳ್ಯ: ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಹೇಳಿ ಅಪರಿಚಿತನೊಬ್ಬ ಯುವತಿಗೆ ಲಕ್ಷಾಂತರ ರೂ. ಪಂಗನಾಮ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಯುವತಿಗೆ ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದಾನೆ.ತಾನು ವಿಸ್ತಾರ ಏರ್ ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದಾನೆ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಉದ್ಯೋಗ ಕೊಡಿಸಲು ಹಣದ ಅಗತ್ಯವಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ.

ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಯುವತಿ ಪಾವತಿಸಿದ್ದಾಳೆ, ಬಳಿಕ ತಾನು ಮೋಸ ಹೋಗಿದ್ದೇನೆಂದು ಅರಿತು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!