Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಧರ್ಮಸ್ಥಳ-ಪಟ್ರಮೆ ರಸ್ತೆಯ ಬದಿಯಲ್ಲಿ ನೇತ್ರಾವತಿ ವಸತಿಗೃಹದ ಸಮೀಪ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿ ಮೃತದೇಹ ಮೇ.6 ರಂದು ಬೆಳಿಗ್ಗೆ 7:50 ಗಂಟೆ ಸುಮಾರಿಗೆ ಯಾವುದೋ ಕಾಯಿಲೆಯಿಂದ ಅಸ್ವಸ್ಥಗೊಂಡವರನ್ನು 108 ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಯ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿ ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಪರಿಚಿತ ಗಂಡಸು ಮೇ.8 ರಂದು ಬೆಳಿಗ್ಗೆ 07:56 ಗಂಟೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತದೇಹದ ಎತ್ತರ 5.9 ಅಡಿ, ದೃಢಕಾಯ ಶರೀರ, ಗೋಧಿ ಮೈಬಣ್ಣ, ದುಂಡು ಮುಖ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಎದೆಯ ಬಳಿ ಕಪ್ಪು ಎಳ್ಳು ಮಚ್ಚೆ ಗುರುತು ಮತ್ತು ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್, ಮತ್ತು ಕೊರಳಿನಲ್ಲಿ ಲೋಹದ ತಾಯಿತಾ ವನ್ನು ಪೊಣಿಸಿದ ಕಪ್ಪು ದಾರ ಧರಿಸಿರುತ್ತಾರೆ. ಮೃತ ವ್ಯಕ್ತಿಯ ವಾರೀಸುದಾರರು/ ಸಂಬಂಧಿಕರು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸು ಠಾಣೆ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಇದ್ದರೆ ಈ ಕೆಳಕಂಡ ದೂರವಾಣಿಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!