Thursday, June 4, 2026
Homeಕರಾವಳಿಧರ್ಮಸ್ಥಳ : ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಧರ್ಮಸ್ಥಳ : ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಮಾಹಿತಿ ಕಚೇರಿ ಪಕ್ಕದಲ್ಲಿರುವ ಶೌಚಾಲಯದ ಬಳಿ ಮಾ.17 ರಂದು ಬೆಳ್ತಂಗಡಿ 10:45 ಕ್ಕೆ  ಸುಮಾರು 60 ರಿಂದ 65 ವರ್ಷದ ಅಪರಿಚಿತ ಗಂಡಸು ಅನಾರೋಗ್ಯದಿಂದ ಅಸ್ವಸ್ಥರಾಗಿ ಬಿದ್ದಿದ್ದರು. ಇವರನ್ನು 108 ಅಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.21 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಪ್ರಕಟಣೆ ಹೊರಡಿಸಿದ್ದಾರೆ( ಮೊ.9740041666)

- Advertisement -

Latest News

error: Content is protected !!