Thursday, June 4, 2026
Homeಕರಾವಳಿಪುತ್ತೂರಿನಲ್ಲಿ ಯುವತಿಯ ಕುತ್ತಿಗೆಗೆ ಇರಿದು ಯುವಕ ಪರಾರಿ

ಪುತ್ತೂರಿನಲ್ಲಿ ಯುವತಿಯ ಕುತ್ತಿಗೆಗೆ ಇರಿದು ಯುವಕ ಪರಾರಿ

- Advertisement -
- Advertisement -

ಪುತ್ತೂರು: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಯುವತಿಯ ಕುತ್ತಿಗೆಗೆ ಇರಿದು ಪರಾರಿಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಘಟನೆ ನಡೆದಿದ್ದು, ಮೂರ್ನಾಲ್ಕು ಬಾರಿ ಯುವತಿಯ ಕತ್ತಿಗೆ ಚೂರಿಯಿಂದ ಇರಿದಿದ್ದಾನೆ.ಇರಿತಕ್ಕೊಳಗಾದ ವಿಟ್ಲ ಮೂಲದ ಯುವತಿ ಗೌರಿ ಸ್ಥಿತಿ ಚಿಂತಾಜನಕವಾಗಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಏಕಾಏಕಿ ಬೈಕ್ ನಲ್ಲಿ ಬಂದ ವ್ಯಕ್ತಿ ಯುವತಿಯನ್ನು ತಡೆದು ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.ಪುತ್ತೂರು ನಗರ ಠಾಣಾ ಪೊಲೀಸರು ಘಟನೆ ನಡೆದ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!