Monday, June 8, 2026
Homeಕರಾವಳಿಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

- Advertisement -
- Advertisement -

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸಜೀಪಮುನ್ನೂರಿನ ಮಿತ್ತಕಟ್ಟ ಎಂಬಲ್ಲಿ ನಡೆದಿದೆ.

ಗೌತಮ ಎಂಬವರು ತಮ್ಮ ಮನೆ ಮುಂದೆ ರಾತ್ರಿ ವೇಳೆ ನಿಲ್ಲಿಸಿದ್ದ ಬೈಕ್ ಗೆ ಯಾರೋ ದುಷ್ಕರ್ಮಿಗಳು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಬೆಳಗ್ಗೆ ಡೈರಿಗೆ ಹಾಲು ಕೊಡೋದಕ್ಕೆ ಅಂತಾ ಬೈಕ್ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಸುಮಾರು 20 ಸಾವಿರ ರೂಪಾಯಿ ನಷ್ಟವಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!