Sunday, June 7, 2026
Homeಅಪರಾಧಮಂಗಳೂರು : ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನಿಗೆ ಚೂರಿ ಇರಿತ!

ಮಂಗಳೂರು : ದುಷ್ಕರ್ಮಿಗಳಿಂದ ವ್ಯಕ್ತಿಯೊಬ್ಬನಿಗೆ ಚೂರಿ ಇರಿತ!

- Advertisement -
- Advertisement -

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದ ಘಟನೆ ನಗರದ ಹೊರವಲಯ ಎದುರುಪದವಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಬಾಗಲಕೋಟೆ ಮೂಲದ ನಿಂಗಣ್ಣ ಎಂಬುವವರು ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿದ್ದ ನಿಂಗಣ್ಣ ಹಾಗೂ ತಂಡವೊಂದರ ಮಧ್ಯೆ ಮಾತಿನ ಚಕಮಕಿ ನಡೆಡಿದ್ದು, ಚಿಕ್ಕ ವಿಷಯದಲ್ಲಿ ಆರಂಭವಾದ ಜಗಳ ಚೂರಿ ಇರಿತದವರೆಗೆ ತಲುಪಿದೆ ಎಂದು ಹೇಳಲಾಗಿದೆ.

ತಂಡವು ನಿಂಗಣ್ಣ ಅವರ ತಲೆಗೆ ಚೂರಿ‌ ಇರಿದಿದ್ದು, ಇದರ ಪರಿಣಾಮ ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ಗಾಯಾಳುವನ್ನು ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಾಗೂ ವೆನ್ಲಾಕ್ ಆಸ್ಪತ್ರೆಗೆ ಕಾವೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!