- Advertisement -
![]()
- Advertisement -
ಉಡುಪಿ: ಉಡುಪಿ ನಗರ, ಮಣಿಪಾಲ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ಎರಡು ಗಂಟೆಗೂ ಅಧಿಕ ಕಾಲ ಗುಡುಗು ಸಹಿತ ಭಾರಿ ಮಳೆ ಸುರಿದಿದೆ.
ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ, ಅಲೆವೂರು, ಪರ್ಕಳ, ಮಲ್ಪೆ ಮೊದಲಾದ ಕಡೆಗಳಲ್ಲಿ ಜೋರಾಗಿ ಗುಡುಗು ಸಹಿತ ಮಳೆ ಸುರಿದಿದೆ.
ಇನ್ನು ಮುಂದಿನ 7 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾದರೆ, ಮತ್ತೆ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
- Advertisement -


