Friday, July 12, 2024
Homeಕರಾವಳಿರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೋಡಿ ಚುನಾವಣಾ ಆಯೋಗ...

ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೋಡಿ ಚುನಾವಣಾ ಆಯೋಗ ಆದೇಶ; ಅಂದ್ಹಾಗೆ ಸಿಂಬಲ್ ಯಾವುದು ಗೊತ್ತಾ?

spot_img
- Advertisement -
- Advertisement -

ಬೆಂಗಳೂರು: ಕರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಅಧಿಕೃತ ಚಿಹ್ನೆ ನೀಡಿ ಚುನಾವಣಾ ಆಯೋಗ ಆದೇಶ ನೀಡಿದೆ. ಉಪೇಂದ್ರ ಅವರ ಪಕ್ಷಕ್ಕೆ  ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಉಪೇಂದ್ರ ಟ್ವೀಟ್‌ ಮೂಲಕ ಹೇಳಿದ್ದಾರೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಉತ್ತಮ ಪ್ರಜಾಕೀಯ ಪಕ್ಷದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ.

- Advertisement -
spot_img

Latest News

error: Content is protected !!