Thursday, June 4, 2026
Homeತಾಜಾ ಸುದ್ದಿಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಎಂದು ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. 

ಪ್ರತಿಭಟನೆ ನಡೆಯುತ್ತಿರುವ ವೇಳೆಗೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆಯೂ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದು ನಂತರದಲ್ಲಿ ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಲ್ಲಿ ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದು, ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ.

ಈ ವಿವಾದ ಹಿನ್ನೆಲೆ ಕಾಲೇಜಿನಲ್ಲಿ ಭದ್ರತೆಯ ದೃಷ್ಟಿಯಿಂದ ಉಪ್ಪಿನಂಗಡಿ ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದಾಗಿ ತಿಳಿದುಬಂದಿದೆ. 

- Advertisement -

Latest News

error: Content is protected !!