Saturday, June 6, 2026
Homeಕರಾವಳಿಉಡುಪಿಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್, ಮೂವರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್, ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ: ಐಟಿ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜಿಲ್ಲೆಯ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವೀಡಿಯೋಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಲ್ಲಿನ ಸೈಬರ್ ಅಪರಾಧ, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸಿಐಡಿ ವಿಶೇಷ ಘಟಕ ಮತ್ತು ಆರ್ಥಿಕ ಅಪರಾಧಗಳ ಇಲಾಖೆಯಿಂದ ಬಂದ ವರದಿಯ ಆಧಾರದ ಮೇಲೆ ಬಾರ್ಕೂರಿನ ಉದ್ದಾಲುಗುಡ್ಡೆ ಹನೇಹಳ್ಳಿಯ ಆನಂದ್, ಬ್ರಹ್ಮಾವರದ ಕೋವಿನ್ ಮಿನೇಜಸ್ ಮತ್ತು ಉಡುಪಿ ಬೊಮ್ಮರಬೆಟ್ಟುವಿನ ರತ್ನಾಕರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆನಂದ್ ಹಾಗೂ ಕೊಲ್ವಿನ್ ಮೆನೇಜಸ್ ಅವರ ಮೇಲೆ ಫೇಸ್‌ಬುಕ್ ಖಾತೆಯಲ್ಲಿ ಅಶ್ಲೀಲ ವೀಡಿಯೊವನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ರತ್ನಾಕರ್ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಶ್ಲೀಲ ವೀಡಿಯೊವನ್ನು ಅಪ್‌ಲೋಡ್ ಮಾಡುತ್ತಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!