Monday, June 8, 2026
Homeತಾಜಾ ಸುದ್ದಿಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸುತ್ತಿರುವ ಗುಜರಾತಿ ಚಿತ್ರಕ್ಕೆ ಉಪ್ಪಿನಂಗಡಿಯ ಹುಡುಗನೇ ಸಂಕಲನಕಾರ

ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸುತ್ತಿರುವ ಗುಜರಾತಿ ಚಿತ್ರಕ್ಕೆ ಉಪ್ಪಿನಂಗಡಿಯ ಹುಡುಗನೇ ಸಂಕಲನಕಾರ

- Advertisement -
- Advertisement -

ಗುಜರಾತಿ ಭಾಷೆಯಲ್ಲಿ ಮೂಡಿ ಬಂದಿರುವ ‘ಚೆಲ್ಲೋ ಶೋ’ ಸಿನಿಮಾ 2023ರ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಅಧಿಕೃತವಾಗಿ ಸ್ಪರ್ಧಿಸುತ್ತಿದೆ. ಈ ಚಿತ್ರಕ್ಕೆ ಕನ್ನಡದ ಪವನ್ ಭಟ್ ಎನ್ನುವವರು ಸಂಕಲನದ ಕೆಲಸ ಮಾಡಿದ್ದಾರೆ.

ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಪವನ್ ಭಟ್ ಮೂಲತಃ ಉಪ್ಪಿನಂಗಡಿಯ ಹುಡುಗ. ಈಗಾಗಲೇ ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಎಡಿಟಿಂಗ್ ಮಾಡಿದ ಹೆಗ್ಗಳಿಕೆ ಇವರದ್ದು. ಸೀನಿಯರ್ ಎಡಿಟರ್ ಜೊತೆ ಸೇರಿಕೊಂಡು ಚೆಲ್ಲೋ ಶೋ ಸಿನಿಮಾಗಾಗಿ ಭಟ್ ಕೆಲಸ ಮಾಡಿದ್ದಾರೆ. ಈಗ ಅವರು ಸಂಕಲಿಸಿದ ಸಿನಿಮಾಗೆ ಆಸ್ಕರ್ ಗೆ ಹೋಗುವಂತಹ ಅವಕಾಶ ಸಿಕ್ಕಿದೆ. ಈ ಸಿನಿಮಾ ಈಗಾಗಲೇ ವಿವಿಧ ದೇಶಗಳಲ್ಲಿ ನಡೆದ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಹತ್ತಾರು ಪ್ರಶಸ್ತಿಗಳನ್ನು ಕೂಡ ಪಡೆದುಕೊಂಡಿದೆ ಎನ್ನುವುದು ವಿಶೇಷ.

- Advertisement -

Latest News

error: Content is protected !!