Wednesday, July 3, 2024
Homeಕರಾವಳಿಮಂಗಳೂರುಉಪ್ಪಿನಂಗಡಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ; ಮನೆಯಲ್ಲಿದ್ದ ವಸ್ತುಗಳು ಭಾಗಶಃ ಸುಟ್ಟು ಕರಕಲು

ಉಪ್ಪಿನಂಗಡಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ; ಮನೆಯಲ್ಲಿದ್ದ ವಸ್ತುಗಳು ಭಾಗಶಃ ಸುಟ್ಟು ಕರಕಲು

spot_img
- Advertisement -
- Advertisement -

ಉಪ್ಪಿನಂಗಡಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿ ಮನೆಯಲ್ಲಿದ್ದ ವಸ್ತುಗಳು ಭಾಗಶಃ ಸುಟ್ಟು ಕರಕಲಾಗಿರುವ ಘಟನೆ ಕಡಬ ತಾಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ನಡೆದಿದೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅನಾಹುತ ಸಂಭವಿಸಿದೆಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದು ನಂತರ ಇಡೀ ಮನೆಗೆ ಆವರಿಸಿದೆ. ಬೆಂಕಿಯ ಪರಿಣಾಮ ಮನೆಯಲ್ಲಿದ್ದ  ಬೆಲೆ ಬಾಳುವ ವಿದ್ಯುತ್ ಉಪಕರಣಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಇನ್ನು ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ಹಾಗಾಗಿ ಪ್ರಾಣಾಪಾಯ ತಪ್ಪಿದೆ. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು ಎನ್ನಲಾಗಿದೆ.

- Advertisement -
spot_img

Latest News

error: Content is protected !!