Saturday, November 14, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸಾವು

ಉಪ್ಪಿನಂಗಡಿ: ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸಾವು

- Advertisement -
- Advertisement -

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಬಿಳಿಯೂರು ಗ್ರಾಮದ ಮೈರಕಟ್ಟೆ ಎಂಬಲ್ಲಿ ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ. 13ರಂದು ನಡೆದಿದೆ.

ಸರಳೀಕಟ್ಟೆ ನೈತಡ್ಕ ನಿವಾಸಿ ಸದಾಶಿವ (55) ಮೃತಪಟ್ಟ ಚಾಲಕ. ಉಪ್ಪಿನಂಗಡಿಯಿಂದ ಬಿಳಿಯೂರು ಕಡೆಗೆ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಅಜಾಗರೂಕತೆಯಿಂದ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ರಿಕ್ಷಾ ಪ್ರಯಾಣಿಕ ವಸಂತ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಆಸ್ಪತ್ರೆಯ ವಿರುದ್ಧ ಸಂಬಂಧಿಕರ ಆಕ್ರೋಶ: ಅಪಘಾತದ ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸದಾಶಿವ ಅವರು ಸಂಜೆಯವರೆಗೂ ಮಾತನಾಡುತ್ತಲೇ ಇದ್ದರು. ಆದರೆ, ಅವರಿಗೆ ಮೈಕೈ ಹಾಗೂ ಎದೆನೋವು ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲು ಸಂಬಂಧಿಕರು ಮುಂದಾಗಿದ್ದರು. ಆದರೆ, ಮುಖ್ಯ ವೈದ್ಯರು ಬರಲಿ ಎಂದು ನೆಪವೊಡ್ಡಿದ ಆಸ್ಪತ್ರೆ ಸಿಬ್ಬಂದಿ ಸ್ಥಳಾಂತರಕ್ಕೆ ಒಪ್ಪಿಗೆ ನೀಡಲಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಸದಾಶಿವ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಿಕ್ಷಾ ಚಾಲಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಬೇಕು ಮತ್ತು ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

- Advertisement -

Latest News

error: Content is protected !!