Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಸಿಲಿಂಡರ್ ಲಾರಿ ಹಾಗೂ ವ್ಯಾಗನರ್ ಕಾರು ಮಧ್ಯೆ ಭೀಕರ ಅಪಘಾತ; ಕಾರಿನಲ್ಲಿದ್ದ ಐವರಿಗೆ ಗಂಭೀರ...

ಉಪ್ಪಿನಂಗಡಿ: ಸಿಲಿಂಡರ್ ಲಾರಿ ಹಾಗೂ ವ್ಯಾಗನರ್ ಕಾರು ಮಧ್ಯೆ ಭೀಕರ ಅಪಘಾತ; ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ: ಸಿಲಿಂಡರ್ ಲಾರಿ ಹಾಗೂ ವ್ಯಾಗನರ್ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ ಚಾಲಕ ದೀಪಕ್ (45), ಗುರುರಾಜ್ (46), ಧನುಷ್ (15), ಭಾರತಿ (48) ಹಾಗೂ ಗೀತಾ (55) ಗಂಭೀರವಾಗಿ ಗಾಯಗೊಂಡವರು.

ಕಾರ್ಕಳ ತಾಲೂಕಿನ ನಕ್ರೆ ಗ್ರಾಮದ ಕುಟುಂಬವೊಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ವ್ಯಾಗನರ್‌ ಕಾರಿನಲ್ಲಿ ತೆರಳುತ್ತಿತ್ತು. ಕಾರು ಉಪ್ಪಿನಂಗಡಿ ಸಮೀಪದ ಕೂಟೇಲು ಬಳಿ ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!