Saturday, August 29, 2026
Homeಕರಾವಳಿಮಂಗಳೂರುಮೂಡಬಿದಿರೆ:  ಯುವತಿಯನ್ನು ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ ವಂಚನೆ; ಉಪ್ಪಿನಂಗಡಿಯ ಫೋಟೋಗ್ರಾಫರ್ ಅರೆಸ್ಟ್

ಮೂಡಬಿದಿರೆ:  ಯುವತಿಯನ್ನು ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ ವಂಚನೆ; ಉಪ್ಪಿನಂಗಡಿಯ ಫೋಟೋಗ್ರಾಫರ್ ಅರೆಸ್ಟ್

- Advertisement -
- Advertisement -

ಮೂಡಬಿದಿರೆ:  ಯುವತಿಯನ್ನು ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೋಟೋಗ್ರಾಫರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂಕೇತ್ ಗಾಣಿಗ (31) ಬಂಧಿತ.

ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಪ್ರಕರಣದ ಆರೋಪಿ

ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾ ಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ.

ಯುವತಿ ಮೂಡಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!