- Advertisement -
- Advertisement -
ಉಪ್ಪಿನಂಗಡಿ: ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪುತ್ತೂರು-ಉಪ್ಪಿನಂಗಡಿ ಹೆದ್ದಾರಿಯ ಕೋಡಿಂಬಾಡಿ ಸಮೀಪದ ಅರ್ಬಿಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಬನ್ನೂರು ಗ್ರಾಮದ ಪ್ರಸಾದ್ ಮೃತಪಟ್ಟ ಚಾಲಕ. ತೆಂಗಿನಕಾಯಿ ಲೋಡ್ ಮಾಡಿಕೊಂಡು ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ ಪ್ರಸಾದ್ ಪ್ರಾಣ ಉಳಿಸಿಕೊಳ್ಳಲು ವಾಹನದಿಂದ ಹೊರಗೆ ಹಾರಲು ಯತ್ನಿಸಿದ್ದು, ಪಲ್ಟಿಯಾದ ವಾಹನವೇ ಅವರ ಮೇಲೆ ಬಿದ್ದಿದೆ. ಪರಿಣಾಮವಾಗಿ ಅವರು ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪುತ್ತೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


