Wednesday, June 24, 2026
HomeUncategorizedಉಪ್ಪಿನಂಗಡಿ; ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ  ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ...

ಉಪ್ಪಿನಂಗಡಿ; ಚಿನ್ನದ ಸರ ಕಸಿದ ಆರೋಪಿಯನ್ನು ಬಂಧಿಸಿ, ರೂ 5,05,000 ಮೌಲ್ಯದ  ಸೊತ್ತನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ದಿನಾಂಕ 04-06-2025 ರಂದು  ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ತೂಕದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ. ಆರೋಪಿಯನ್ನು ಪುತ್ತೂರು, ನೆಕ್ಕಿಲಾಡಿ ಎಂಬಲ್ಲಿಂದ ಆರೆಸ್ಟ್ ಮಾಡಿ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಆರೋಪಿತನಿಂದ ಅಂದಾಜು ರೂ 4,54,000/-ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ  ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಪತ್ತೆಕಾರ್ಯದಲ್ಲಿ, ಮಾನ್ಯ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಮಾನ್ಯ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ನಡೆಸಿರುತ್ತದೆ.

- Advertisement -

Latest News

error: Content is protected !!