Friday, August 28, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಜೇನು ಕೃಷಿ ಕಲಿಸುತ್ತೇನೆಂದು ಹೇಳಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ;ಆರೋಪಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ಜೇನು ಕೃಷಿ ಕಲಿಸುತ್ತೇನೆಂದು ಹೇಳಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ;ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಪ್ಪಿನಂಗಡಿ: ಜೇನು ಕೃಷಿ ಕಲಿಸುತ್ತೇನೆಂದು ಹೇಳಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ  ಅಬ್ದುಲ್ ಗಪೂರ್ ಬಂಧಿತ ಆರೋಪಿ,

ಬೆಳಗಾವಿ ಮೂಲದ ಕುಟುಂಬ  ಕೆಲಸಕ್ಕಾಗಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು . ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ ಕಾರಣ    ತನ್ನ ಮಗಳನ್ನು 2 ತಿಂಗಳಿಂದ ಆರೋಪಿಯ ಮನೆಯಲ್ಲಿ ಬಿಟ್ಟಿದ್ದರು ಎನ್ನಲಾಗಿದೆ.

ನೊಂದ ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದವರು  ಹಿಂತಿರುಗಿ ಬಂದಾಗ  ಆರೋಪಿಯು ಬಾಲಕಿಯನ್ನು  ನಿರಂತರವಾಗಿ ಅತ್ಯಾಚಾರ ಮಾಡಿರುವುದಾಗಿ ನೊಂದ ಬಾಲಕಿ ತಿಳಿಸಿರುತ್ತಾಳೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012 ಪ್ರಕರಣ ದಾಖಲಾಗಿದೆ. ತನಿಖೆ ನಡೆಸಲಾಗುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Latest News

error: Content is protected !!