Thursday, May 2, 2024
Homeಕರಾವಳಿಉಪ್ಪಿನಂಗಡಿಯಲ್ಲಿ ಹಿಂದೂ ವರ್ತಕರ ವಿರುದ್ಧ ಅಪಪ್ರಚಾರ ಆರೋಪ :ಪೊಲೀಸ್ ಠಾಣೆಗೆ ದೂರು ನೀಡಿದ ವರ್ತಕರ ಸಂಘ

ಉಪ್ಪಿನಂಗಡಿಯಲ್ಲಿ ಹಿಂದೂ ವರ್ತಕರ ವಿರುದ್ಧ ಅಪಪ್ರಚಾರ ಆರೋಪ :ಪೊಲೀಸ್ ಠಾಣೆಗೆ ದೂರು ನೀಡಿದ ವರ್ತಕರ ಸಂಘ

spot_img
- Advertisement -
- Advertisement -

ಉಪ್ಪಿನಂಗಡಿ:  ಇಲ್ಲಿನ 32 ಹಿಂದೂ ಅಂಗಡಿಗಳ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿಯ ವರ್ತಕರ ಸಂಘವು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದೆ.

ದೂರಿನಲ್ಲಿ ಏನಿದೆ?
ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ  ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಹರಿಬಿಟ್ಟಿದ್ದಾರೆ. ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದು ಉಲ್ಲೇಖಿಸಿ ನಮ್ಮ ಅಂಗಡಿಗಳ ಹೆಸರನ್ನು ಸೇರಿದಂತೆ ಒಟ್ಟು 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ ‘ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ’ ಎಂಬ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ವಾಕ್ಯಗಳನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ರೀತಿಯ ಸಂದೇಶ ಕಳುಹಿಸಿ ಮತೀಯ ಸಾಮರಸ್ಯ ಹಾಳು ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!