Wednesday, June 24, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

ಉಪ್ಪಿನಂಗಡಿ; ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಉಪ್ಪಿನಂಗಡಿ; ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ- ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ನಡೆದಿದೆ.ಹಿರೇಬಂಡಾಡಿಯ ರವೀಂದ್ರ ರೈ ಮುರದಮೇಲುರವರ ಪುತ್ರ ಲಿಖಿತ್ ರೈ ಮೃತ ದುರ್ದೈವಿ.

ಏ 22ರಂದು ಸಂಜೆ ಲಿಖಿತ್ ರೈ ಅವರು ತಮ್ಮ ಬೈಕ್ ನಲ್ಲಿ ಉಪ್ಪಿನಂಗಡಿ – ಕೊಯಿಲ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ತಲುಪಿದಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ದಯಾನಂದ ಹಾಗೂ ಸಾರ್ವಜನಿಕರು ತಕ್ಷಣವೇ ಉಪಚರಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!