Monday, May 6, 2024
Homeತಾಜಾ ಸುದ್ದಿಅಮೆರಿಕ ಸಂಸತ್ ಕಟ್ಟಡದ ಮೇಲೆ ದಾಳಿ: ಸಂಘರ್ಷದಲ್ಲಿ ಸಾವಿನ ಸಂಖ್ಯೆ 4ಕ್ಕೇರಿಕೆ

ಅಮೆರಿಕ ಸಂಸತ್ ಕಟ್ಟಡದ ಮೇಲೆ ದಾಳಿ: ಸಂಘರ್ಷದಲ್ಲಿ ಸಾವಿನ ಸಂಖ್ಯೆ 4ಕ್ಕೇರಿಕೆ

spot_img
- Advertisement -
- Advertisement -

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ವಿವಾದ ಮುಂದುವರೆದಿದ್ದು, ಅಧಿಕಾರ ತ್ಯಜಿಸಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಬುಧವಾರ ಪ್ರತಿಭಟನೆ ಆರಂಭಿಸಿದ್ದು, ಯುಎಸ್ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಗದ್ದಲ ಸೃಷ್ಟಿಸುವ ಸಂದರ್ಭದಲ್ಲಿ ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಅಂತೆಯೇ ವಾಷಿಂಗ್ಟನ್ ನಲ್ಲಿ ಮುಂದಿನ 15 ದಿನಗಳ ಕಾಲ ತುರ್ತು ಪರಿಸ್ಥಿತಿ ಹೇರಲಾಗಿದೆ.

ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ಫ್ಯೂ ಹೇರಲಾಗಿದೆ. ಕಳೆದ ನವೆಂಬರ್‌ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ಗೆಲುವನ್ನು ಟ್ರಂಪ್ ಬೆಂಬಲಿಗರು ವಿರೋಧಿಸುತ್ತಿದ್ದಾರೆ. ಈ ಮಧ್ಯೆ ಘಟನೆಯನ್ನು ಖಂಡಿಸಿರುವ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್, ಇದು ಅಮೆರಿಕ ಇತಿಹಾಸದ ಅತ್ಯಂತ ‘ಕರಾಳ ಕ್ಷಣ’ ಎಂದು ಆಕ್ರೋಶ ತೋಡಿಕೊಂಡಿದ್ದಾರೆ.

ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿದ ನೂರಾರು ಪ್ರತಿಭಟನಾಕಾರರು ಧಾಂದಲೆ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಅಮೆರಿಕ ಕಾಂಗ್ರೆಸ್‌ನ ಅನೇಕ ಅಧಿಕಾರಿಗಳು ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಿಎನ್‌ಎನ್ ‌ವರದಿ ಮಾಡಿದೆ.

- Advertisement -
spot_img

Latest News

error: Content is protected !!