- Advertisement -
![]()
- Advertisement -
ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್ ನಡುವೆ ಐತಿಹಾಸಿಕ ಶಾಂತಿ ಒಪ್ಪಂದ ಪೂರ್ಣಗೊಂಡಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಬೆಳವಣಿಗೆಯಿಂದಾಗಿ ಜಾಗತಿಕ ತೈಲ ಸಾರಿಗೆಯ ಪ್ರಮುಖ ಮಾರ್ಗವಾದ ಹೊರ್ಮುಜ್ ಜಲಸಂಧಿಯ ನೌಕಾ ದಿಗ್ರಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದ್ದು, ಇನ್ಮುಂದೆ ಈ ಜಲಮಾರ್ಗವು ಸಂಪೂರ್ಣ ಮುಕ್ತವಾಗಿರಲಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಉಭಯ ದೇಶಗಳು ಸಮ್ಮತಿಸಿವೆ ಎಂದು ಸಂಧಾನಕಾರರಾಗಿ ಪ್ರಮುಖ ಪಾತ್ರ ವಹಿಸಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಲೆಬನಾನ್ ಸೇರಿದಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮಿಲಿಟರಿ ಕಾರ್ಯಾಚರಣೆಗಳನ್ನು ಶಾಶ್ವತವಾಗಿ ಸ್ಥಗಿತಗೊಳಿಸಲು ಭಾನುವಾರ ಎಕ್ಸ್ ಜಾಲತಾಣದಲ್ಲಿ ಮೊದಲ ಬಾರಿಗೆ ಈ ವಿಷಯವನ್ನು ಬಹಿರಂಗಪಡಿಸಿದರು. ಇದರ ಬೆನ್ನಲ್ಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಒಪ್ಪಂದ ಪೂರ್ಣಗೊಂಡಿರುವುದನ್ನು ಖಚಿತಪಡಿಸಿದ್ದಾರೆ
- Advertisement -


