Saturday, September 12, 2026
Homeಕರಾವಳಿಬೆಳ್ತಂಗಡಿ ಮೂಲದ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ

ಬೆಳ್ತಂಗಡಿ ಮೂಲದ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಹೆಮ್ಮೆಯ ಪುತ್ರಿ, ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಉಷಾರಾಣಿ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಉಷಾರಾಣಿ ಅವರು ಬೆಳ್ತಂಗಡಿಯ ಪ್ರಸಿದ್ಧ ಹಿರಿಯ ವಕೀಲರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಪುತ್ರಿಯಾಗಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ.) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದಾರೆ.

ತಮ್ಮ ಸುದೀರ್ಘ ನ್ಯಾಯಾಂಗ ಸೇವೆಯಲ್ಲಿ ವಿವಿಧ ಹಂತಗಳಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಇವರು, ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಸಲ್ಲಿಸಿದ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಇದೀಗ ಉನ್ನತ ನ್ಯಾಯಾಲಯದ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ನೀಡಲಾಗಿದೆ.

- Advertisement -

Latest News

error: Content is protected !!