Sunday, April 28, 2024
Homeಕರಾವಳಿಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ: ಮಾಜಿ ಸಚಿವ ಯು.ಟಿ. ಖಾದರ್...

ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ: ಮಾಜಿ ಸಚಿವ ಯು.ಟಿ. ಖಾದರ್ ಆಕ್ರೋಶ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದರ ಬೆನ್ನಲ್ಲೇ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಜಾನುವಾರು ಸಾಗಣೆ ಮಾಡುವವರ ಮೇಲೆ ಸಾರ್ವಜನಿಕರು ಕಾನೂನು ಉಲ್ಲಂಘಿಸಿ ಹಲ್ಲೆ ಮಾಡಿದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪೊಲೀಸರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಇದರ ಬೆನ್ನಲ್ಲೇ ಅವರನ್ನು ವರ್ಗಾವಣೆ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್’ಗಿರಿ ನಡೆಸಿದರೆ ಕ್ರಮಕೈಗೊಳ್ಳುತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಲಾಗಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದೆ. ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ಎಂದು ಒತ್ತಾಯಿಸಿರುವ ಯು.ಟಿ. ಖಾದರ್ ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -
spot_img

Latest News

error: Content is protected !!